पवित्र बाइबिल
ಹಳೆಯ ಒಡಂಬಡಿಕೆ
ಕೀರ್ತನೆಗಳು
100ನೇ ಅಧ್ಯಾಯ
- Verse 1: ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I
- Verse 2: ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ I ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ II
- Verse 3: ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II
- Verse 4: ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II
- Verse 5: ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II