P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
6ನೇ ಅಧ್ಯಾಯ
- Verse 1: ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II
- Verse 2: ಕನಿಕರಿಸು ಹೇ ಪ್ರಭು, ನಾನು ಬಲಹೀನನು I ಗುಣಪಡಿಸು ಸಡಿಲವಾದ ಎನ್ನೆಲುಬುಗಳನು II
- Verse 3: ಜೀವಾತ್ಮ ನಾ ಬಳಲಿ ತತ್ತರಿಸುತ್ತಿರುವೆ I ಎಲ್ಲಿಯತನಕ ಪ್ರಭು ನೀ ಕೈಬಿಟ್ಟಿರುವೇ II
- Verse 4: ನನ್ನ ಕಡೆ ತಿರುಗಿ ಪ್ರಭು, ನನ್ನನುದ್ಧರಿಸು I ನಿನ್ನಚಲ ಪ್ರೀತಿಯಿಂದ ನನ್ನ ರಕ್ಷಿಸು II
- Verse 5: ಸತ್ತವರಲಿ ನಿನ್ನ ಸ್ಮರಿಸುವವರಾರು? I ಪಾತಾಳದಲಿ ನಿನ್ನ ಸ್ತುತಿಸುವವರಾರು?II
- Verse 6: ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II
- Verse 7: ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II
- Verse 8: ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II
- Verse 9: ಆಲಿಸಿಹನು ಪ್ರಭು ಎನ್ನ ಪ್ರಾರ್ಥನೆಯನು I ಅಂಗೀಕರಿಸಿಹನು ಎನ್ನಯ ವಿಜ್ಞಾಪನೆಯನು II
- Verse 10: ತತ್ತರಿಸುವರು ಶತ್ರುಗಳೆಲ್ಲ ನಿರಾಶೆಯಿಂದ I ತಟ್ಟನೆ ಹಿಂಜರಿಯುವರವರೆಲ್ಲ ಅತಿ ಲಜ್ಜೆಯಿಂದ II