पवित्र बाइबिल
ಹಳೆಯ ಒಡಂಬಡಿಕೆ
ಕೀರ್ತನೆಗಳು
3ನೇ ಅಧ್ಯಾಯ
- Verse 1: ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II
- Verse 2: “ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II
- Verse 3: ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II
- Verse 4: ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II
- Verse 5: ಹಾಯಾಗಿ ಮಲಗಿ ನಿದ್ರಿಸುವೆನು I ಸುಖಿಯಾಗಿ ಮರಳಿ ಎದ್ದೇಳುವೆನು I ಕಾಯ್ದು ಕಾಪಾಡುವನು ಪ್ರಭು ನನ್ನನು II
- Verse 6: ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II
- Verse 7: ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II
- Verse 8: ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II