P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
101ನೇ ಅಧ್ಯಾಯ
- Verse 1: ಪ್ರೀತಿನೀತಿಗಳ ಕುರಿತು ಹಾಡುವೆನು I ಹೇ ಪ್ರಭೂ, ನಿನ್ನನೆ ಹಾಡಿಹೊಗಳುವೆನು II
- Verse 2: ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II
- Verse 3: ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II
- Verse 4: ನನ್ನ ಬಿಟ್ಟು ತೊಲಗಲಿ ಮೂರ್ಖತನ I ನನಗೆ ಹತ್ತದೆಯಿರಲಿ ಕೆಟ್ಟತನ II
- Verse 5: ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II
- Verse 6: ಆರಿಸಿಕೊಳ್ವೆನು ನಾಡಿನ ಸಜ್ಜನರನು I ಇರಿಸಿಕೊಳ್ವೆನು ನನ್ನೊಡನೆ ವಾಸಿಸಲವರನು I ಸನ್ಮಾರ್ಗಿಯೆ ನನ್ನ ಸೇವಕನಾಗಿರುವನು II
- Verse 7: ಮೋಸಗಾರನು ವಾಸಮಾಡನು ನನ್ನ ನಿವಾಸದಲಿ I ಸುಳ್ಳುಗಾರನು ನಿಲ್ಲಲಾರನು ನನ್ನ ಸಮ್ಮುಖದಲಿ II
- Verse 8: ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II