पवित्र बाइबिल
ಹಳೆಯ ಒಡಂಬಡಿಕೆ
ಕೀರ್ತನೆಗಳು
67ನೇ ಅಧ್ಯಾಯ
- Verse 1: ಹರಸು ದೇವಾ, ನಮ್ಮನಾಶೀರ್ವದಿಸು I ನಿನ್ನ ಮುಖಕಾಂತಿಯಿಂದೆಮ್ಮನು ಬೆಳಗಿಸು II
- Verse 2: ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II
- Verse 3: ನಿನ್ನ ಕೀರ್ತಿಸಲಿ ದೇವಾ, ಜನರು I ಸಂಕೀರ್ತಿಸಲಿ ಅವರೆಲ್ಲರೂ II
- Verse 4: ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II
- Verse 5: ನಿನ್ನ ಕೀರ್ತಿಸಲಿ ದೇವಾ, ಜನರು I ಸಂಕೀರ್ತಿಸಲಿ ಅವರೆಲ್ಲರೂ II
- Verse 6: ಇತ್ತನೆಮ್ಮ ದೇವನು ಆಶೀರ್ವಾದವನು I ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು II
- Verse 7: ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II