ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
2ನೇ ಅಧ್ಯಾಯ
- Verse 1: ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II
- Verse 2: ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II
- Verse 3: “ಅವರೆಮಗೆ ತೊಡಿಸಿಹ ಬೇಡಿಗಳನು ಮುರಿಯೋಣ” ಎನ್ನುತಿಹರು I “ಅವರೆಮಗೆ ಹಾಕಿದ ಬಂಧನಗಳನು ಹರಿಯೋಣ” ಎನ್ನುತಿಹರು II
- Verse 4: ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II
- Verse 5: ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II
- Verse 6: ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II
- Verse 7: ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II
- Verse 8: ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II
- Verse 9: ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II
- Verse 10: ಎಂತಲೇ ವಿವೇಕಿಗಳಾಗಿರಿ, ರಾಜರುಗಳೇ, I ಬುದ್ಧಿವಾದಕೆ ಕಿವಿಗೊಡಿ, ದೇಶಾಧಿಪತಿಗಳೇ II
- Verse 11: “ಭಯಭಕುತಿಯಿಂದ ಪ್ರಭುವಿಗೆ ಸೇವೆಮಾಡಿರಿ I ನಡುನಡುಗುತ ಆತನ ಪಾದಪೂಜೆ ಮಾಡಿರಿ” II
- Verse 12: ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II