ಕನ್ನಡ ಸತ್ಯವೇದವು
ಹಳೆಯ ಒಡಂಬಡಿಕೆ
ಕೀರ್ತನೆಗಳು
23ನೇ ಅಧ್ಯಾಯ
- Verse 1: ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II
- Verse 2: ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II
- Verse 3: ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II
- Verse 4: ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
- Verse 5: ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
- Verse 6: ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II