P. O. C ബൈബിള്
ಹಳೆಯ ಒಡಂಬಡಿಕೆ
ಕೀರ್ತನೆಗಳು
93ನೇ ಅಧ್ಯಾಯ
- Verse 1: ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II
- Verse 2: ನಿನ್ನ ಸಿಂಹಾಸನ ಸ್ಥಿರ ಆದಿಯಿಂದ I ನೀನಿರುವೆ ಪ್ರಭು ಅನಾದಿಯಿಂದ II
- Verse 3: ಸಮುದ್ರಗಳು ಪ್ರಭು, ಮೊರೆಯುತಿಹವು I ಗರ್ಜನೆಗೈದು ಭೋರ್ಗರೆಯುತಿಹವು II
- Verse 4: ಸಾಗರಗಳ ಗರ್ಜನೆಗಿಂತ I ಸಮುದ್ರ ತರಂಗಗಳಿಗಿಂತ I ಮಹೋನ್ನತ ಪ್ರಭು ಬಲವಂತ II
- Verse 5: ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II