ಕನ್ನಡ ಸತ್ಯವೇದವು
ಹೊಸ ಒಡಂಬಡಿಕೆ
1 ಕೊರಿಂಥಿಯರಿಗೆ
13ನೇ ಅಧ್ಯಾಯ
- Verse 1: ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ.
- Verse 2: ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.
- Verse 3: ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ?
- Verse 4: ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.
- Verse 5: ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.
- Verse 6: ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.
- Verse 7: ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.
- Verse 8: ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.
- Verse 9: ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.
- Verse 10: ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ.
- Verse 11: ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ.
- Verse 12: ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.
- Verse 13: ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.