ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು.