ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು.
Go to Home Page