ಆದರೆ ಅಹೀಮಾಚನು ಮತ್ತೊಮ್ಮೆ, “ಚಿಂತೆಯಿಲ್ಲ, ನನ್ನನ್ನೂ ಕಳುಹಿಸಿ,” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು, “ಹೋಗು,” ಎಂದು ಹೇಳಿದನು. ಆಗ ಅಹೀಮಾಚನು ಜೋರ್ಡನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.