ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.