ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ;