ನಿಮ್ಮ ದಾಸನ ಮೇಲೆ ಮರುಕವಿಟ್ಟು, ಪ್ರಾಣ ಉಳಿಸಿದ್ದೇನೋ ಮಹಾ ಉಪಕಾರ ಆಯಿತು; ಆದರೆ ಗುಡ್ಡಗಾಡಿಗೆ ಓಡಿಹೋಗಲು ನನ್ನಿಂದಾಗದು, ಅಲ್ಲಿಗೆ ಸೇರುವುದಕ್ಕೆ ಮುಂಚೆಯೇ ಈ ವಿಪತ್ತಿಗೆ ಸಿಕ್ಕಿ ಸತ್ತೇನು.