ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.