ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.