ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.