ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು.