ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತಾ ಬಂದರು. ಈ ಹಿರಿಯರು ಸರ್ವೇಶ್ವರ ಇಸ್ರಯೇಲರ ಪರವಾಗಿ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು.