ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.