ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು.