ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು.