ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.
Go to Home Page