ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು.