ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಮಾಡಬಹುದೆ? ನಮ್ಮಲ್ಲಿ ಯಾರಾದರೊಬ್ಬನು ನಿನ್ನ ಹೆಂಡತಿಯನ್ನು ಕೂಡಿರಬಹುದಿತ್ತಲ್ಲವೆ? ಆಗ ನಿನ್ನಿಂದ ನನಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲವೆ?” ಎಂದು ಹೇಳಿದನು.