ಕಾಡುಮೃಗಗಳು ಕೊಂದ ಆಡುಕುರಿಗಳ ಅಳಿದುಳಿಕೆಗಳನ್ನು ನಿಮಗೆ ತಂದುತೋರಿಸದೆ, ನಾನೇ ಈಡು ತೆತ್ತಿದ್ದೇನೆ. ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಕದ್ದುಹೋದ ಜಾನುವಾರುಗಳಿಗೆ ಪರಿಹಾರವನ್ನು ನನ್ನ ಕೈಯಿಂದಲೆ ಕಿತ್ತುಕೊಂಡಿದ್ದೀರಿ.