ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.