ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.