ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.