ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಸರ್ವೇಶ್ವರನಿಗೆ ಅಡ್ಡಬಿದ್ದು ಇಸ್ರಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು, ಅವರಿಗೆ, “ಏಳಿ, ಸರ್ವೇಶ್ವರ ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ,” ಎಂದನು.