ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,” ಎಂದನು.