ಒಡನೆ ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಏಲಿ, “ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು.