ಒಂದು ತಿಂಗಳ ನಂತರ ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಸಂಧಾನ ಮಾಡಿಕೋ; ನಾವು ನಿನಗೆ ಅಧೀನರಾಗಿರುತ್ತೇವೆ,” ಎಂದು ಬೇಡಿಕೊಂಡರು.