ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.