ಆದುದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು, “ನೀವು ಈವರೆಗೂ ದೇವಾಲಯವನ್ನೇಕೆ ದುರಸ್ತು ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದುಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ. ಕೂಡಲೆ ಅದನ್ನು ದೇವಾಲಯದ ದುರಸ್ತಿಗಾಗಿ ಕೊಡಿ,” ಎಂದು ಹೇಳಿದನು.