ಆಗ ಬೂಜ್‍ನವನಾದ ಬರಕೇಲನ ಮಗ ಎಲೀಹುವನಿಗೆ ಸಿಟ್ಟೇರಿತು. ಇವನು ರಾಮ್‍ಗೋತ್ರಕ್ಕೆ ಸೇರಿದವನು. ಯೋಬನು ತಾನು ದೇವರಿಗಿಂತ ನ್ಯಾಯವಂತನೆಂದು ಎಣಿಸಿಕೊಂಡ ಕಾರಣ ಎಲೀಹುವನಿಗೆ ಸಿಟ್ಟುಹತ್ತಿತ್ತು.