ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.