ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.