ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.