ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆ: ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಮನೆಯೊಳಗಿನಿಂದ ಆಚೆಗೆ ಹಾಕಿದೆ; ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ, ಕತ್ತಲಲ್ಲಿ ಆ ಸಾಮಗ್ರಿಗಳನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆ.
Go to Home Page