ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು. ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದನ್ನು ಕಂಡೆನೋ ಅಂಥದನ್ನೇ ಕಂಡೆನು. ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತ ದರ್ಶನದಂಥ ದರ್ಶನ ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆ.