ಅವನು ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರ ಅಂಗಗಳಾಗಿದ್ದವು.