“ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕಾಗಿ ಮುಂದೆ ನಡೆದಾಗ ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗು ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ,” ಎಂದು ಕೂಗಿದನು.