ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದು ಆಜ್ಞಾಪಿಸಿದನು.