ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.