ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು. ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕರೆದು, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ,” ಎಂದು ಹೇಳಿದನು.