ಯೆಹೋಷಾಫಾಟನನ್ನು, “ಯುದ್ಧಮಾಡುವುದಕ್ಕೆ ನೀನೂ ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತಿಯೋ?’ ಎಂದು ಕೇಳಿದನು. ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.