ಏಳನೆಯ ವರ್ಷದಲ್ಲಿ ಯೆಹೋಯಾದಾವನು ‘ಕಾರಿ’ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು.