ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನಿಗಿದ್ದ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲೇ ಇಟ್ಟುಕೊಂಡನು. ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದನು.